ಬಾರೋ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ
ಬಾರೋ ಸಾಧನಕೇರಿಗೆ
ಬಾರೋ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ
ಬಾರೋ ಸಾಧನಕೇರಿಗೆ
♪
ಮಳೆಯು ಎಳೆಯುವ ತೇರಿಗೆ
ಹಸಿರು ಏರಿದೆ ಏರಿಗೆ
♪
ಹಸಿರು ಸೇರಿದೆ ಊರಿಗೆ
ಹಸಿರು ಚಾಚಿದೆ ದಾರಿಗೆ
ನಂದನದ ತುಣುಕೊಂದು ಬಿದ್ದಿದೆ
ನಂದನದ ತುಣುಕೊಂದು ಬಿದ್ದಿದೆ
ಈ ನೋಟ ಸೇರದು ಯಾರಿಗೆ?
ಬಾರೋ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ
♪
ಮೋಡಗಳ ನೆರಳಾಟವು
ಅಡವಿ ಹೂಗಳ ಕೂಟವು
ಕೋಟಿ ಜೇನ್ನೊಣ ಕೂಟವು
ಯಕ್ಷಿ ಮಾಡಿದ ಮಾಟವು
ಭೂಮಿತಾಯ್ ಒಡಮುರಿದು ಎದ್ದಳೋ
ಭೂಮಿತಾಯ್ ಒಡಮುರಿದು ಎದ್ದಳೋ
ಶ್ರಾವಣದ ಸಿರಿ ಬರಲಿದೆ
ಬಾರೋ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ
♪
ಮರವು ಮುಗಿಲಿಗೆ ನೀಡಿದೆ
ಗಿಡದ ಹೊದರೊಳು ಹಾಡಿದೆ
ಗಾಳಿ ಎಲ್ಲೂ ಆಡಿದೆ
ದುಗುಡ ಇಲ್ಲಿಂದೋಡಿದೆ
ಹೇಳು ಗೆಳೆಯಾ ಬೇರೆ ಎಲ್ಲಿ
ಹೇಳು ಗೆಳೆಯಾ ಬೇರೆ ಎಲ್ಲಿ
ಈ ಥರದ ನೋಟವ ನೋಡಿದೆ?
ಬಾರೋ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ
♪
ಬಾರೋ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ
ಬಾರೋ ಸಾಧನಕೇರಿಗೆ
Поcмотреть все песни артиста
Другие альбомы исполнителя